ಕುಡಿದ ಮತ್ತಿನಲ್ಲಿ ಜಗಳ; ಕ್ಷುಲ್ಲಕ ಕಾರಣಕ್ಕೆ ಗೆಳೆಯನ ಕೊಲೆ

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಗೆಳೆಯನನ್ನೇ ಕತ್ತು ಕೊಯ್ದು ಕೊಲೆಗೈದ ಆರೋಪಿ.  ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ ಯಾಗಿದ್ದಾನೆ. ಈತನ ಗೆಳೆಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಈರಣ್ಣ ಯಾನೆ ದಿನೇಶ್ ಎಂಬುವವನೆ ಕೊಲೆ ಮಾಡಿದ ಆರೋಪಿ.

ಈ ಘಟನೆ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ನಡೆದಿದೆ. ರಾತ್ರಿ ವಿಪರೀತವಾಗಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದಾರೆ. ಅವರ ಗಲಾಟೆ ವಿಕೋಪಕ್ಕೆ ಹೋಗಿ ಅರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕುತ್ತಿಗೆ ಕೊಯ್ದಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಘಟನೆ ಬಳಿಕ ಆರೋಪಿ ತಾನೇ ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ. ಸ್ಥಳಕ್ಕೆ ಆಗಮಿಸಿದ ಉಡುಪಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.