ಹುಬ್ಬಳ್ಳಿ ರೈಲ್ವೆ ಯೋಜನೆಯ ಪುನರಾರಂಭಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು – ಪ್ರಮೋದ ಹೆಗಡೆ

ಯಲ್ಲಾಪುರ: ಪಟ್ಟಣದ ಅಡಕೆ ಭವನದಲ್ಲಿ ಅಂಕೋಲಾ ಹುಬ್ಬಳ್ಳಿ ರೈಲ್ವೆ ಯೋಜನೆಯ ಪುನರಾರಂಭದ ಕುರಿತು ನಾಗರಿಕ ವೇದಿಕೆ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಆಶ್ರಯದಲ್ಲಿ ಸಮಾಲೋಚನಾ ಸಭೆ ನಡೆಯಿತು.

ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ನಿಯೋಗದ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಯೋಜನೆಯ ಪುನರಾರಂಭಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ರೈಲ್ವೇ ಸಮಿತಿ ಕಾರ್ಯದರ್ಶಿ ರಾಜೀವ ಗಾಂವ್ಕರ ಮಾತನಾಡಿ, ಯೋಜನೆಯ ಅನುಷ್ಠಾನಕ್ಕೆ ಇರುವ ತೊಡಕುಗಳು ಮತ್ತು ನಿವಾರಣೆಗೆ ಕೈಗೊಂಡ ಕ್ರಮದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಯೋಜನೆ ಅನುಷ್ಠಾನಕ್ಕೆ ತೀವೃಗೊಳ್ಳಬೇಕು ಎಂದರು.

ಈ ವೇಳೆ ಜಿಲ್ಲಾ ರೈಲ್ವೆ ಸೇವಾ ಸಮಿತಿ ಅಧ್ಯಕ್ಷ ಜಾರ್ಜ್ ಫರ್ನಾಂಡೀಸ್, ಉಪಾಧ್ಯಕ್ಷ ವೆಂಕಟು ಮಾಸ್ತರ,
ಕೃಷ್ಣಾನಂದ ದೇವನಳ್ಳಿ, ಪ.ಪಂ.ಅಧ್ಯಕ್ಷೆ ಸುನಂದಾ ದಾಸ್, ಬೀರಣ್ಣ ನಾಯಕ ಮೊಗಟಾ, ಡಿ.ಎನ್.ಗಾಂವ್ಕರ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಭಟ್ ಆನಗೋಡ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಶಂಕರ ಭಟ್ಟ ತಾರೀಮಕ್ಕಿ ಇತರರಿದ್ದರು.