ಮಂಡ್ಯ: ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿ ತಡೆ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಮದ್ದೂರಿನ ಗೆಜ್ಜಲಗೆರೆ ಬಳಿ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಚಾಲಕ ಆಸೀಫ್ (45) ಎಂದು ಗುರುತಿಸಲಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೇರಳಕ್ಕೆ ಹೊರಟಿದ್ದ ಕೇರಳ ಸಾರಿಗೆ ಸಂಸ್ಥೆಯ ಬಸ್ಸು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಬೆಳಗ್ಗಿನ ಜಾವ 5:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿದ್ದು, ಈ ಅವಘಡಕ್ಕೆ ಕಾರಣವಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.