ಹಾಸನಾಂಬ ದೇವಿ ದರ್ಶನ ಅಂತ್ಯ; 20 ಲಕ್ಷ ಭಕ್ತರಿಂದ ದರ್ಶನ

ಹಾಸನ, ನವೆಂಬರ್​ 03: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನನಾಂಬ ದೇವಿ ದರ್ಶನ ಅಂತ್ಯವಾಗಿದೆ. ಇಂದು ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಹೀಗಾಗಿ ದೇವಾಲಯದ ಆವರಣ ಭಕ್ತರಿಂದ ತುಂಬಿ ತುಳುಕುತ್ತಿದೆ. ವಿಶ್ವರೂಪ ದರ್ಶನ ಬಳಿಕ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ​​ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ, ಶಾಸಕ ಸ್ವರೂಪ್‌, ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಎಸ್​​ಪಿ ಮೊಹಮ್ಮದ್​ ಸುಜಿತಾ ಮತ್ತು ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್​ ಮಾಡಲಾಗುತ್ತದೆ.

ಅಕ್ಟೋಬರ್​ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್​ 25 ರಿಂದ ನವೆಂಬರ್​ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಒಂಬತ್ತು ದಿನಗಳಲ್ಲಿ ದಾಖಲೆಯ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದರು. ಮತ್ತು ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದು ಬಂದಿದೆ.

ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಭಕ್ತರು ದೇವಿಯ ದರ್ಶನ ಪಡೆದರು.