ಹುಬ್ಬಳ್ಳಿ, ನ.04: ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್ಗೆ ಸಾರ್ವಜನಿಕರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಖದೀಮನವರ ತಮ್ಮ ಏರಿಯಾದಲ್ಲಿನ ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಹೆಡ್ ಕಾನ್ಸ್ಟೇಬಲ್ಗೆ ಸಾರ್ವಜನಿಕರು ಥಳಿಸಿದ್ದಾರೆ. ಬಳಿಕ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.