ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಮೇಲೆ ಲೋಕಾಯುಕ್ತ ದಾಳಿ

ಭಟ್ಕಳ ನವೆಂಬರ್‌ 15 : ಪರೋಕ್ಷವಾಗಿ ಲಂಚ ಸ್ವೀಕರಿಸುತ್ತಿರುವ ವೇಳೆ ಭಟ್ಕಳದ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೊಹ್ಮದ ಇದ್ರಿಸ್ ಮೋಹತೇಷಾಮ್ ಎನ್ನುವವರ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಕಾರವಾರ ಲೋಕಾಯುಕ್ತ ಎಸ್ಪಿ ಕುಮಾರ ಚಂದ್ರ ಹಾಗೂ ಪ್ರಭಾರಿ ಲೋಕಾಯುಕ್ತ ಡಿವೈಎಸ್ಪಿ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಒಳಚರಂಡಿಗೆ ಸಂಬಂದ ಪಟ್ಟ ವಿಷಯಕ್ಕೆ ಪರೋಕ್ಷವಾಗಿ ಲಂಚ ಸ್ವೀಕರಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಪುರಸಭೆ ಕಚೇರಿಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾರನ್ನು ವಿಚಾರಣೆ ನಡೆಸುತ್ತಿದ್ದಾರೆ.ದಾಳಿಯಲ್ಲಿ ಪ್ರಸಾದ ಪನ್ನೆಕರ ಹಾಗೂ 20 ಜನ ಪಿ.ಐ ಸಿಬ್ಬಂದಿಗಳು ಭಾಗಿಯಾಗಿದ್ರು