ಅಕ್ರಮ: ಬಿಬಿಎಂಪಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು, ನವೆಂಬರ್​ 27: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂ ಬೆಳಗ್ಗೆ ಶಾಕ್​ ನೀಡಿದೆ. ದೇವಯ್ಯ ಪಾರ್ಕ್ ಬಳಿ ಇರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವಯ್ಯಾಲಿಕಾವಲ್​ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮಾಡಿ, ದಾಖಲೆ ಪರಿಶೀಲನೆ ನಡೆಸುತ್ತಿದೆ.

ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ಮಾರ್ಗದರ್ಶನದಲ್ಲಿ ಡಿವೈಎಸ್​​ಪಿ ಸುನೀಲ್ ವೈ ನಾಯಕ್ ನೇತೃತ್ವದಲ್ಲಿ ಎಂಟು ತಂಡಗಳು ಬೆಳಗ್ಗೆ 6.30ರ ಸುಮಾರಿಗೆ ಏಕಕಾಲಕ್ಕೆ‌ ದಾಳಿ ಮಾಡಿವೆ. ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.