ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರ, ಡಿ.೦4 : ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು.

ಇನ್ನೂ ಮಹಾಯುತಿಯಿಂದ ದೇವೇಂದ್ರ ಫಡ್ನವೀಸ್ ಹೆಸರು ಘೋಷಣೆಯೊಂದೇ ಬಾಕಿ ಇದೆ. ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ತೆರೆಬಿದ್ದಿದೆ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಆಯ್ಕೆಯಾಗಿದ್ದಾರೆ. ನಾಳೆ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.