ದೇವನಹಳ್ಳಿ, ಡಿ.04: ಅಪರಿಚಿತ ವಾಹನವೊಂದು ಹಿಟ್ ಆ್ಯಂಡ್ ರನ್ ಮಾಡಿ ಚಾಲಕ ಪರಾರಿಯಾಗಿದ್ದು, ತಾಯಿ ಮೃತಪಟ್ಟಿದ್ದರೆ, ಮಗುವಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ನಂದಿಮೋರಿ ಬಳಿ ನಡೆದಿದೆ. ನಗರದ ಪಾಲನಜೋಗಹಳ್ಳಿ ನಿವಾಸಿ ಭಾನುಪ್ರಿಯ (25) ಮೃತ ದುರ್ದೈವಿ. ಮನೋಜ್ (4) ಗಂಭೀರವಾಗಿ ಗಾಯಗೊಂಡ ಮಗು.
ಶಾಲೆಯಿಂದ ಮಗುವನ್ನು ವಾಪಸ್ ಮನೆಗೆ ಕರೆದುಕೊಂಡು ಬರುವ ವೇಳೆ ದುರ್ಘಟನೆ ನಡೆದಿದೆ. ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸಾವ್ರದಿಂದಾಗಿ ತಾಯಿ ಭಾನುಪ್ರಿಯ ಸಾವನ್ನಪ್ಪಿದ್ದಾರೆ. ಮಗುವಿನ ತಲೆಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಆಸ್ವತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ದೊಡ್ಡಬಳ್ಳಾಪುರ ಸರ್ಕಾರಿ ಆಸ್ವತ್ರೆಯ ಶವಾಗಾರಕ್ಕೆ ಮೃತ ದೇಹ ರವಾನಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.