ತಿರುಪತಿ ಸನ್ನಿಧಾನಕ್ಕೆ ತೆರಳಿ ಮುಡಿ ಕೊಟ್ಟ ಶಿವರಾಜ್​ಕುಮಾರ್-ಗೀತಾ

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಚಿಕಿತ್ಸೆಗಾಗಿ ಶಿವರಾಜ್​ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.

ಶಿವರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ನಟನೆಯತ್ತ ಗಮನ ಹರಿಸಲಿದ್ದಾರೆ. ಈಗ ಶಿವಣ್ಣನ ಲುಕ್ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ.

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಈಗ ಅವರು ನಟಿಸಿರೋ ‘45’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಈ ಸಿನಿಮಾ ಕೂಡ ಶೀಘ್ರವೇ ರಿಲೀಸ್ ಆಗುವ ಸಾಧ್ಯತೆ ಇದೆ.