Joe Root Records: ನ್ಯೂಝಿಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಇನಿಂಗ್ಸ್ನಲ್ಲಿ ಜೋ ರೂಟ್ ಆಕರ್ಷಕ ಅರ್ಧಶತಕ ಬಾರಿಸಿದೆ. ಈ ಅರ್ಧಶತಕದೊಂದಿಗೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್ ಸ್ಕೋರ್ 350ರ ಗಡಿದಾಟಿದ್ದು, ಒಟ್ಟು ಮುನ್ನಡೆ 500 ರನ್ಗಳನ್ನು ದಾಟಿದೆ.
ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ 50+ ಸ್ಕೋರ್ಗಳಿಸುವುದರಲ್ಲಿ ಶತಕ ಪೂರೈಸುವ ಮೂಲಕ ಎಂಬುದು ವಿಶೇಷ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಜೋ ರೂಟ್ 76 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ವಿಶ್ವದ ನಾಲ್ಕನೇ ಬ್ಯಾಟರ್ ಎನಿಸಿಕೊಂಡರು.
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 1989 ರಿಂದ 2013ರ ನಡುವೆ 200 ಟೆಸ್ಟ್ ಪಂದ್ಯಗಳಲ್ಲಿ 329 ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 119 ಬಾರಿ 50+ ಸ್ಕೋರ್ಗಳಿಸಿದ್ದಾರೆ.
ಸಚಿನ್ ನಂತರದ ಸ್ಥಾನಗಳಲ್ಲಿ ಜಾಕ್ಸ್ ಕಾಲಿಸ್ ಹಾಗೂ ರಿಕಿ ಪಾಂಟಿಂಗ್ ಇದ್ದಾರೆ. 1995 ರಿಂದ 2013 ರ ನಡುವೆ 280 ಟೆಸ್ಟ್ ಇನಿಂಗ್ಸ್ ಆಡಿರುವ ಜಾಕ್ಸ್ ಕಾಲಿಸ್ 103 ಬಾರಿ ಅರ್ಧಶತಕಕ್ಕಿಂತ ಹೆಚ್ಚು ರನ್ಗಳಿಸಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 287 ಇನಿಂಗ್ಸ್ಗಳಲ್ಲಿ 103 ಬಾರಿ 50+ ಸ್ಕೋರ್ಗಳಿಸಿದ್ದಾರೆ.
ಇದೀಗ 276ನೇ ಇನಿಂಗ್ಸ್ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ 100 ಬಾರಿ 50+ ಸ್ಕೋರ್ಗಳಿಸಿದ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡ್ನ ಮೊದಲ ಬ್ಯಾಟರ್ ಹಾಗೂ ವಿಶ್ವದ 4ನೇ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಜೋ ರೂಟ್ ಅವರ ಈ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದು, 71 ಓವರ್ಗಳ ಮುಕ್ತಾಯದ ವೇಳೆಗೆ ಆಂಗ್ಲರು 5 ವಿಕೆಟ್ ಕಳೆದುಕೊಂಡು 353 ರನ್ ಕಲೆಹಾಕಿದೆ. ಅಲ್ಲದೆ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ಇಂಗ್ಲೆಂಡ್ ಒಟ್ಟು 508 ರನ್ಗಳಿಸಿದೆ.