
ಬೆಂಗಳೂರು: ಪಕ್ಷದ ಕೋರ್ ಕಮಿಟಿ ಮೀಟಿಂಗ್ ನಂತರ ಮಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಬಿಜೆಪಿ ಶಾಸಕರಾದ ಅರಬೈಲ್ ಶಿವರಾಂ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಿದರು.

ಅವರಿಬ್ಬರೂ ಬಿಜೆಪಿ ಟಿಕೆಟ್ ಗಳಿಂದ ಗೆದ್ದು ಶಾಸಕರಾಗಿದ್ದರೂ ಕಾಂಗ್ರೆಸ್ ಪಾಳೆಯದಲ್ಲಿ ಹೆಚ್ಚಿಗೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ, ಇಬ್ಬರ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಇವತ್ತಿನ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ ಎಂದು ವಿಜಯೇಂದ್ರ ಹೇಳಿದರು.



