
ನವದೆಹಲಿ: ದೆಹಲಿಯ ರಜೌರಿ ಗಾರ್ಡನ್ ಮೆಟ್ರೋ ನಿಲ್ದಾಣದ ಬಳಿ ಕಟ್ಟಡದ ಮೊದಲ ಮಹಡಿಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯ ಸಾಮಾಜಿಕ ಮಾಧ್ಯಮದ ದೃಶ್ಯಗಳು ವೈರಲ್ ಆಗಿವೆ.
ಜಂಗಲ್ ಜಾಂಬೋರಿ ರೆಸ್ಟೋರೆಂಟ್‌ನ ಮೇಲ್ಛಾವಣಿಯಲ್ಲಿ ಬೆಂಕಿ ಕೆನ್ನಾಲಿಗೆ ಚಾಚುತ್ತಿತ್ತು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಆದರೆ, ಇದಕ್ಕೂ ಮೊದಲು ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ಹಲವರು ಮೇಲಿಂದ ಪಕ್ಕದ ಟೆರೇಸಿಗೆ ಜಿಗಿದಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದು ಇನ್ನೂ ತಿಳಿದು ಬಂದಿಲ್ಲ.
