ಕರ್ನಾಟಕಕ್ಕೆ ಎಸ್​ಎಂ ಕೃಷ್ಣ ಕೊಡುಗೆಗಳೇನು? ಚಿತ್ರ ಸಹಿತ ಮಾಹಿತಿ ಇಲ್ಲಿದೆ

ಕರ್ನಾಟಕದ ಹಿರಿಯ ರಾಜಕಾರಣಿ, ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ನಿಧಿನರಾಗಿದ್ದಾರೆ. ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್​ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ

1934 ರಂದು ಮಹಾತ್ಮ ಗಾಂಧೀಜಿ ಅವರು ಸೋಮನಹಳ್ಳಿಗೆ ಬಂದ್ದಿದ್ದರು. ಈ ವೇಳೆ ಮೂರು ವರ್ಷದ ಪುಟ್ಟ ಎಸ್​ಎಂ ಕೃಷ್ಣ ಅವರು ಗಾಂಧೀಜಿ ಅವರಿಗೆ ಹೂವಿನ ಮಾಲೆ ಹಾಕಿದ್ದರು. ಪುಟ್ಟ ಎಸ್​ಎಂ ಕೃಷ್ಣ ಅವರ ಗಲ್ಲವನ್ನು ಮುಟ್ಟಿ ಮಹಾತ್ಮಾ ಗಾಂಧಿಜಿ ಮಾತನಾಡಿಸಿದ ಕ್ಷಣ.

ಕೃಷ್ಣ ಅವರು 1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವ ಮೂಲಕ ತಮ್ಮ ಚುನಾವಣಾ ರಾಜಕೀಯ ಜೀವನವನ್ನು ಆರಂಭಿಸಿದರು. ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಎಸ್​ಎಂ ಕೃಷ್ಣ ಅವರು 1972 ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದರು ಮತ್ತು ಅಂದಿನ ಮುಖ್ಯಮಂತ್ರಿ ದೇವರಾಜ್ ಅರಸರ ಸಂಪುಟದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು.

ಎಸ್​ಎಂ ಕೃಷ್ಣ ಅವರು ಹಲವು ಯೋಜನೆಗಳಲ್ಲಿ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘ ಕೂಡ ಒಂದು. ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಆರ್ಥಿಕ ಸ್ವಾವಲಂಬನೆಗಾಗಿ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘ ಆರಂಭಿಸಿದರು. ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘ ಮನೆ ಮನೆ ತಲುಪಿದ್ದು, ಇದರಿಂದ ಕೋಟ್ಯಾಂತರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.

ಕರ್ನಾಟಕದ ಅಸಂಘಟಿತ ವಲಯದ ಕಾರ್ಮಿಕರು, ಮಧ್ಯಮ ಮತ್ತು ಕಡಿಮೆ-ಮಧ್ಯಮ ಆದಾಯ ಹೊಂದಿದವರನ್ನು ಕೇಂದ್ರೀಕರಿಸಿ, ಎಲ್ಲರಿಗೂ ಕೈಗೆಟುಕುವ ಆರೋಗ್ಯ ಸೇವೆಯನ್ನು ನೀಡಲು ಯಶಸ್ವಿನಿ ಯೋಜನೆ ಆರಂಭಿಸಿದರು. ಇದರಿಂದ ಪ್ರತಿಯಿಬ್ಬರಿಗೂ ಹೆಚ್ಚು ಅಗತ್ಯವಿರುವಾಗ ಉನ್ನತ ಗುಣಮಟ್ಟದ ಆರೋಗ್ಯ ಪಡೆಯಬಹುದಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ 2003-2004ರ ಅವಧಿಯಲ್ಲಿ ಎಸ್​ಎಂ ಕೃಷ್ಣ ಪರಿಹಾರ ಘೋಷಣೆ ಮಾಡಿದ್ದರು. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರು ಪರಿಹಾರಕ್ಕೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಮುಖ್ಯಮಂತ್ರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದರು. ಆಗ, ಎಸ್​ಎಂ ಕೃಷ್ಣ ಅವರು ಸಚಿವ ಸಂಪುಟ ಸಮೇತ ಬಾಗಲಕೋಟೆ ಬಂದು, 638 ಕೋಟಿ ರೂ. ಪರಿಹಾರ ಘೋಷಣೆ ಮಾಡಿದರು.

ಎಸ್​ಎಂ ಕೃಷ್ಣ ಅವರು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಎಲ್ಲಾ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದರು. ಮಧ್ಯಾಹ್ನದ ಬಿಸಿಯೂಟ ಯೋಜನೆ ಇಂದಿಗೂ ಚಾಲನೆಯಲ್ಲಿದೆ.

ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಸಿಲಿಕಾನ್​ ಸಿಟಿ ಅಥವಾ ಸಿಲಿಕಾನ್​ ವ್ಯಾಲಿ ಆಫ್​ ಇಂಡಿಯಾ ಎಂಬ ಹೆಸರು ಬರಲು ಎಸ್​ಎಂ ಕೃಷ್ಣ ಅವರ ಕೊಡುಗೆ ಅಪಾರವಾಗಿದೆ. ಐಟಿ-ಬಿಟಿ ಕ್ಷೇತ್ರಕ್ಕೆ ಇವರು ಅಗಾದವಾದ ಬೆಂಬಲ ನೀಡಿದರು. ಇವರ ಕಾಲದಲ್ಲಿಯೇ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಹಾಗೇ ರಾಜ್ಯದಲ್ಲೇ ಮೊದಲ ಫ್ಲೈ ಓವರ್​ ತಲೆ ಎತ್ತಿತು