ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಂಡಿದ್ದು ಜನರು ಭಯ ಬೀತರಾಗಿದ್ದಾರೆ. ಇದರ ಪರಿಣಾಮ ತಮಿಳುನಾಡು ಹಾಗೂ ಕರ್ನಾಟಕದ ಮೇಲಾಗಲಿದ್ದು ಈಗಾಗಲೇ ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ತುಂತುರು ಮಳೆ ಶುರುವಾಗಿದೆ, ಮೋಡಕವಿದ ವಾತಾವರಣವಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ..
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ. ಕಳೆದ ಒಂದು ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನ ಮೇಲೆ ಗೋಚರಿಸಲಾರಂಭಿಸಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.
ಬೀದರ್ನಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.