ಭಾರೀ ಚರ್ಚೆ ಹುಟ್ಟಾಕ್ಕಿದ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಬರೋಬ್ಬರಿ 6 ತಿಂಗಳ ಬಳಿಕ ಪ್ರಕರಣದಲ್ಲಿ ದರ್ಶನ್ ನಿಟ್ಟುಸಿರು ಬಿಡುವಂತಾಗಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಜೈಲಿನಿಂದ ಹೊರಬಂದಿದ್ದರು. ಇದೀಗ ಪೂರ್ಣಪ್ರಮಾಣದಲ್ಲಿ ಜಾಮೀನು ಸಿಕ್ಕಿದೆ.
ಪ್ರಕರಣದಲ್ಲಿ ನಟ ದರ್ಶನ್ ಎ2 ಆಗಿದ್ದರೆ ಪವಿತ್ರಾ ಗೌಡ ಎ1 ಆಗಿದ್ದರು. ಇದೀಗ ಇಬ್ಬರಿಗೂ ಜಾಮೀನು ಸಿಕ್ಕಿದೆ. ಜೂನ್ 8ರಂದು ರೇಣುಕಾಸ್ವಾಮಿ ಸಾವನ್ನಪ್ಪಿದ್ದರು. ಬಳಿಕ ಪ್ರಕರಣದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಂತರ ವಿಚಾರಣಾಧೀನ ಕೈದಿಗಳಾಗಿ ಎಲ್ಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆ ಎಂದು ಗೊತ್ತಾದ ಬಳಿಕ ಕೆಲವರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಆರೋಪಿಗಳೆಲ್ಲಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ನಲ್ಲಿ ಇದೀಗ 7 ಜನರಿಗೆ ಜಾಮೀನು ಮಂಜೂರಾಗಿದೆ.