Tulasi Gowda: ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ಇನ್ನಿಲ್ಲ!

ಕಾರವಾರ ಡಿಸೆಂಬರ್‌ 16 : ವೃಕ್ಷಮಾತೆ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸಿಯಾಗಿರುವ ತುಳಸಿ ಗೌಡ ಅವರು ಇಂದು (ಡಿ.16) ಅನಾರೋಗ್ಯದಿಂದ 87 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ತುಳಸಿ ಗೌಡ, ಸಾಲು ಸಾಲು ಗಿಡ ನೆಟ್ಟು ಪೋಷಿಸಿದ ಹಿರಿಮೆ ಇವರಿಗಿದೆ. ಪರಿಸರ ಕಾಳಜಿ‌ಯಿಂದಾಗಿ 2020 ರಲ್ಲಿ ಈ ವೃಕ್ಷಮಾತೆ ತುಳಸಿ ಗೌಡ ಪದ್ಮಶ್ರೀ ಪ್ರಶಸ್ತಿಗೂ ಭಾಜನರಾಗಿದ್ದರು.

ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸಿದ ಮಹಾತಾಯಿ ತುಳಸಿ ಗೌಡ ಇಹಲೋಕ ತ್ಯಜಿಸಿದ್ದಾರೆ. ಇನ್ನು ಈ ಕಾಲದಲ್ಲಿ ಈಕೆಯನ್ನು ನಿಜವಾದ ಪರಿಸರ ಪ್ರೇಮಿ ಎಂದೇ ಕರೆಯಬಹುದು.