ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವ್ಯಾಚ್ಯ ಪದ ಬಳಕೆ- ಸಿ.ಟಿ. ರವಿ ಬಂಧನ!

ಬೆಳಗಾವಿ (ಡಿ.19):  ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಅವ್ಯಾಚ್ಯ ಪದ ಬಳಕೆ ಮಾಡಿದ ಬೆನ್ನಲ್ಲಿಯೇ ಹಿರೇಬಾಗೇವಾಡಿಯಲ್ಲಿ ದೂರು ದಾಖಲಿಸಲಾಗಿತ್ತು. ಇದರ ಬೆನ್ನಲ್ಲಿಯೇ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಸುವರ್ಣ ಸೌಧದಲ್ಲಿದ್ದ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ್ದಾರೆ.

ಬೆಳಗಾವಿ ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲು ಆಗಿತ್ತು. BNS 75 ಮತ್ತು 79ರಡಿ ಕೇಸ್ ದಾಖಲು ಆಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ ದೂರಿನನ್ವಯ ಮಹಿಳೆಯರು ವಿರುದ್ಧ ಅವಾಚ್ಚ ಶಬ್ದ ಬಳಕೆ ಆರೋಪದಡಿ ಕೇಸ್ ದಾಖಲಿಸಲಾಗಿತ್ತು. ಇದೀಗ ಸುವರ್ಣ ಸೌಧದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಸ್ಥಳದಿಂದ ಸಿ.ಟಿ. ರವಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿ ಕರೆದೊಯ್ದಿದ್ದಾರೆ.