ಕಾರವಾರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ನಡೆಸಲಾಯಿತು.
ಸ್ವಾತಂತ್ರ್ಯೋವದ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ ಕೈಗೊಂಡಿದ್ದು, ಅದರ ಪ್ರಯುಕ್ತ ಶಿರವಾಡ ರೈಲ್ವೆ ನಿಲ್ದಾಣ ಹಾಗೂ ರೈಲ್ವೆ ಹಳಿಗಳನ್ನು ತಪಾಸಣೆ ಮಾಡಿದರು.