ಬೆಂಗಳೂರು, ಡಿಸೆಂಬರ್ 25: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಸ್‍ಮಸ್ ಹಬ್ಬದ ಸಡಗರ ಮನೆ ಮಾಡಿದೆ. ನಗರದ ಚರ್ಚ್ಗಳಲ್ಲಿ ಕ್ರಿಸ್ಮಸ್ ಆಚರಣೆ ಜೋರಾಗಿದೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ನಲ್ಲಿ ಕ್ರಿಸ್ಮಸ್ ಸಂಭ್ರಮ ಮನೆಮಾಡಿದ್ದು, ಸುತ್ತ-ಮುತ್ತ ಹಬ್ಬದ ವಾತಾವರಣ ಇದೆ. ಮೇರಿ ಮಾತೆಗೆ ಕ್ಯಾಂಡಲ್ ಹಚ್ಚುವ ಮೂಲಕ ಕ್ರಿಶ್ಚಿಯನ್ನರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್ ವಿದ್ಯುತ್ ದೀಪಾಲಂಕಾರದೊಂದಿಗೆ ಝಗಮಗಿಸುತ್ತಿದೆ.
ಮಂಗಳವಾರ ಮಧ್ಯರಾತ್ರಿಯಿಂದಲೇ ಚರ್ಚ್ನಲ್ಲಿ ವಿಶೇಷ ಪ್ರಾರ್ಥನೆ ಆರಂಭವಾಗಿದೆ. ಇಂದು ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಐವತ್ತು ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚ್ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ ಹೇರಲಾಗಿದೆ. ಚರ್ಚ್ಗೆ ಬರುವ ಜನರ ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲದೆ, ನಗರದ ಇತರ ಚರ್ಚ್ಗಳೂ ಲೈಟಿಂಗ್ಸ್ನಲ್ಲಿ ಝಗಮಗಿಸುತ್ತಿವೆ.