ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮೂಲದ ಸೋಷಿಯಲ್ ಮೀಡಿಯಾ ಸ್ಟಾರ್ ಹಾಗೂ ರೇಡಿಯೋ ಜಾಕಿ ಸಿಮ್ರಾನ್ ಸಿಂಗ್ (25) ಗುರುಗ್ರಾಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 7 ಲಕ್ಷ ಅಭಿಮಾನಿಗಳನ್ನು ಒಳಗೊಂಡಿದ್ದ ಸಿಮ್ರಾನ್, ಇದೇ ತಿಂಗಳ ಡಿಸೆಂಬರ್ 13ರಂದು ಕೊನೆಯದ್ದಾಗಿ ರೀಲ್ಸ್‌ವೊಂದನ್ನ ಪೋಸ್ಟ್ ಮಾಡಿದ್ದರು. ಬಳಿಕ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ.
ಮಾಹಿತಿ ಪ್ರಕಾರ, ಸಿಮ್ರಾನ್ ಗುರುಗ್ರಾಮ್ ಸೆಕ್ಟರ್-47ರಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಆಕೆಯ ಸ್ನೇಹಿತನೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಆಕೆಯ ಮೃತದೇಹವನ್ನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.