ಹೊನ್ನಾವರ : ಬೆಂಗಳೂರಿನಿಂದ ಗೋಕರ್ಣಕ್ಕೆ ಬರುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಹತ್ತಕ್ಕು ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಾಳೆಗದ್ದೆ ಬಳಿ ನಡೆದಿದೆ
ಬೆಂಗಳೂರಿನಿಂದ ಗೋಕರ್ಣಕ್ಕೆ ಬರುತ್ತಿದ್ದ (ARO1 -T -5051)ಬೆನಕ ಟ್ರಾವೇಲ್ಸ್ ಕಂಪನಿಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 20 ಮಂದಿ ಪ್ರಯಾಣಿಕರು ಅದರಲ್ಲಿ ಐದು ಮಂದಿಗೆ ಗಂಭೀರವಾಗಿ ಗಾಯವಾಗಿದೆ. ಗಂಭೀರ ಮತ್ತು ಸಣ್ಣಪುಟ್ಟ ಗಾಯಗೊಂಡ ಒಟ್ಟು 8 ಮಂದಿಯನ್ನ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಗಾಯಾಳುಗಳನ್ನು 108 ಹಾಗೂ ಖಾಸಗಿ ಅಂಬುಲೆನ್ಸ್ ಮೂಲಕ ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್‌ಐ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.