ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಬೈಕ್‌ ಗೆ ಡಿಕ್ಕಿ ಹೊಡೆದ ‘KSRTC’ ಬಸ್ ಮೂವರು ಸ್ಥಳದಲ್ಲೇ ಸಾವು.!

ಹೊನ್ನಾವರ : ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.

ವಿಜಯಪುರದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ರಾಘವೇಂದ್ರ ಸೋಮಯ್ಯಗೌಡ (34) ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.