ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಕುಡಿದು ವಾಹನ ಚಾಲನೆ ಮಾಡದಂತೆ ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಜನರು ಕ್ಯಾರೇ ಎನ್ನದೇ ಮದ್ಯ ಸೇವಿಸಿ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಹೌದು, ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಾದರೆ, ಡಿಸೆಂಬರ್ 31ರ ರಾತ್ರಿ ಕೇವಲ 513 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಹೊಸ ವರ್ಷ 2025 ರನ್ನು ರಾಜ್ಯದ ಜನರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿ ಹಲವು ರಸ್ತೆಗಳಲ್ಲಿ ಜನ ಜಂಗುಳಿ ನೆರೆದಿತ್ತು. ಇನ್ನೂ, ಇಯರ್ ಎಂಡ್ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟವಾಗಿತ್ತು. ಅಬಕಾರಿ ಇಲಾಖೆಗೆ ಭಾರೀ ಆದಾಯ ತಂದುಕೊಟ್ಟಿದೆ.