ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ಹೈಲೈಟ್ಸ್.!

ನವದೆಹಲಿ: ದೇಶಾದ್ಯಂತ ಮನೆ ಮನೆಯಲ್ಲೂ ಸ್ವಾತಂತ್ರ‍್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9 ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

  • ಸ್ವಾತಂತ್ರ‍್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತ ಪ್ರೀತಿಸುವವರನ್ನು ಅಭಿನಂದಿಸುತ್ತೇನೆ.
  • ಹೊಸ ಸಂಕಲ್ಪದೊಂದಿಗೆ, ಈ ದಿನ ಹೊಸ ದಿಕ್ಕಿನತ್ತ ಹೆಜ್ಜೆ ಹಾಕಲಿದ್ದೇವೆ.
  • ಸ್ವಾತಂತ್ರ‍್ಯ ಹೋರಾಟಗಾರರನ್ನು ಸ್ಮರಿಸಬೇಕು. ನಮ್ಮ ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ.
  • ಈ ದಿನ ದೇಶಕ್ಕೆ ದುಡಿದವರ ಸ್ಮರಿಸುವ ದಿನ.
  • ರಾಷ್ಟ್ರ ಪ್ರಜ್ಞೆಯನ್ನು ಜಾಗೃತಗೊಳಿಸಿದ ನಾರಾಯಣ ಗುರು, ಸ್ವಾಮಿ ವಿವೇಕಾನಂದ ಮತ್ತು ರವೀಂದ್ರನಾಥ ಠಾಗೋರ್‌ಗೆ ಗೌರವ ಸಲ್ಲಿಸಬೇಕು.
  • ಭಾರತ ಪ್ರಜಾಪ್ರಭುತ್ವದ ತಾಯಿ.
  • 2047 ರ ವೇಳೆಗೆ ಸ್ವಾತಂತ್ರ‍್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾಗರಿಕರು 5 ಪ್ರತಿಜ್ಞೆ ಮಾಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು.
  • ಬುಡಕಟ್ಟು ನಾಯಕರ ಹೋರಾಟ ಸ್ಮರಿಸಿದ ಮೋದಿ
  • ನಮ್ಮ ಅಭಿವೃದ್ಧಿಯನ್ನು ಅನುಮಾನಿಸಿದ್ದರು
  • ಈ ನಾಡಿನ ಜನರಲ್ಲಿ ವಿಶೇಷತೆ ಇದೆ ಎಂದು ಅವರಿಗೆ ತಿಳಿದಿರಲಿಲ್ಲ. ಈ ಮಣ್ಣಿನ ವಿಶೇಷ ಏನೆಂಬುದು ಅವರಿಗೆ ಗೊತ್ತಿರಲಿಲ್ಲ
  • ಭಾರತವು ಮಹತ್ವಾಕಾಂಕ್ಷೆಯ ರಾಷ್ಟ್ರ. ಒಗ್ಗಟ್ಟಿನ ಮನೋಭಾವದೊಂದಿಗೆ ಬದಲಾವಣೆಗಳನ್ನು ತರಲಾಗುತ್ತಿದೆ. ದೇಶದ ಅಭಿವೃದ್ಧಿಗೆ 25 ವರ್ಷ ಮುಡಿಪಿಡಿ
  • ದೇಶದ ಅಭಿವೃದ್ಧಿಗಾಗಿ ಯುವಕರು ತಮ್ಮ ಜೀವನದ ಮುಂದಿನ 25 ವರ್ಷಗಳನ್ನು ಮುಡಿಪಾಗಿಡಬೇಕು ಎಂದು ನಾನು ಒತ್ತಾಯಿಸುತ್ತೇನೆ.
  • ಆತ್ಮನಿರ್ಭರ ಭಾರತ ಜನಾಂದೋಲನವಾಗಲಿ.
  • ಭಾರತವು ಉತ್ಪಾದನಾ ರಂಗದಲ್ಲಿ ಇತಿಹಾಸ ನಿರ್ಮಿಸುತ್ತಿದೆ.
  • 5ಉ, ಚಿಪ್ ತಯಾರಿಕೆ, ಡಿಜಿಟಲ್ ಇಂಡಿಯಾದ ಮೂಲಕ ತಳಮಟ್ಟದಲ್ಲಿ ಕ್ರಾಂತಿಯನ್ನು ತರುತ್ತಿದ್ದೇವೆ.
  • ಡಿಜಿಟಲ್ ತಂತ್ರಜ್ಞಾನದ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿವೆ.
  • ಭ್ರಷ್ಟರಿಗೆ ಶಿಕ್ಷೆ ವಿಧಿಸುವ ಮನಸ್ಥಿತಿ ಜನರಲ್ಲಿ ಇಲ್ಲದಿದ್ದರೆ, ದೇಶವು ಗರಿಷ್ಠ ವೇಗದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ.
  • ರಾಜ್ಯಗಳ ನಡುವೆ ‘ಸಹಕಾರಿ ಸ್ಪರ್ಧಾತ್ಮಕ ಒಕ್ಕೂಟ ವ್ಯವಸ್ಥೆ’ಯನ್ನು ಉತ್ತೇಜಿಸುವ ಅವಶ್ಯಕತೆಯಿದೆ.
  • 130 ಕೋಟಿ ಜನರು ಒಂದು ಹೆಜ್ಜೆ ಮುಂದಿಟ್ಟರೆ, ದೇಶವು 130 ಕೋಟಿ ಹೆಜ್ಜೆಗಳನ್ನು ಮುಂದಕ್ಕಿಟ್ಟಂತೆ.
  • ದೇಶವನ್ನು ಲೂಟಿ ಮಾಡಿದವರಿಂದಲೇ, ದೇಶಕ್ಕೆ ಮರುಪಾವತಿ ಮಾಡಿಸುವ ನಿಟ್ಟಿನಲ್ಲೇ ನಮ್ಮ ಪ್ರಯತ್ನ ನಡೆದಿದೆ.
  • ಭ್ರಷ್ಟಾಚಾರವು ಗೆದ್ದಲಿನ ಹಾಗೆ ದೇಶವನ್ನು ಹಾಳು ಮಾಡುತ್ತಿದೆ. ದೇಶವು ಅದರ ವಿರುದ್ಧ ಹೋರಾಡಬೇಕಾಗಿದೆ.
  • ದೇಶದ ಮುಂದಿರುವ ಎರಡು ದೊಡ್ಡ ಸವಾಲುಗಳೆಂದರೆ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ. ಇವುಗಳ ವಿರುದ್ಧದ ಹೋರಾಟದಲ್ಲಿ ನಾನು ಎಲ್ಲಾ ಭಾರತೀಯರ ಬೆಂಬಲವನ್ನು ಕೋರುತ್ತೇನೆ.