ಬೆಂಗಳೂರು: ಜ.6 ರಿಂದ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಳ್ಳುತ್ತಿಲ್ಲ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಜನವರಿ 6 ರಿಂದ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಲಿದೆ ಎಂಬ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಬಿಎಂಆರ್ಸಿಎಲ್ ಸ್ಪಷ್ಟನೆ ನೀಡಿದೆ.
ಬಿಎಂಆರ್ಸಿಎಲ್ ಹೇಳಿದ್ದೇನು?
ಹಳದಿ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗುತ್ತಿಲ್ಲ. ಬದಲಿಗೆ ಕೋಲ್ಕತ್ತಾದ ಟಿಟಾಗರ್ ರೈಲು ಸಂಸ್ಥೆ ಕಾರ್ಖಾನೆಯಲ್ಲಿ ತಯಾರಿಸಲಾದ ಮೊದಲ ರೈಲು ಸೆಟ್ ಜನವರಿ 6 ರಂದು ಅನಾವರಣಗೊಳ್ಳುತ್ತಿದೆ ಎಂದು ತಿಳಿಸಿದೆ.
ಬಹು ನಿರೀಕ್ಷಿತ ಆರ್ವಿ ರಸ್ತೆಯಿಂದ ಬೊಮ್ಮಸಂದ್ರ ನಮ್ಮ ಮೆಟ್ರೊ ಹಳದಿ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಬೋಗಿಗಳು ಇನ್ನೂ ಬಂದಿಲ್ಲ.