ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ. ಅದು ಕೂಡ ಕೇವಲ 4 ವರ್ಷಗಳಲ್ಲಿ ನೂರು ವಿಕೆಟ್ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 24ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ನಾಲ್ಕು ವಿಕೆಟ್ಗಳೊಂದಿಗೆ ಸಿರಾಜ್ ಟೆಸ್ಟ್ ಕ್ರಿಕೆಟ್ನಲ್ಲಿ 100 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ನೂರು ವಿಕೆಟ್ ಕಬಳಿಸಿ ಭಾರತದ 4ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಭಾರತೀಯ ಬೌಲರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ (195) ಅಗ್ರಸ್ಥಾನದಲ್ಲಿದ್ದರೆ, ಜಸ್ಪ್ರೀತ್ ಬುಮ್ರಾ (156) ಹಾಗೂ ರವೀಂದ್ರ ಜಡೇಜಾ (131) ನಂತರದ ಸ್ಥಾನಗಳಲಿದ್ದಾರೆ. ಇದೀಗ ಈ ಪಟ್ಟಿಗೆ ಮೊಹಮ್ಮದ್ ಸಿರಾಜ್ ಕೂಡ ಎಂಟ್ರಿ ಕೊಟ್ಟಿದ್ದಾರೆ.
ಟೀಮ್ ಇಂಡಿಯಾ ಪರ ಈವರೆಗೆ 36 ಟೆಸ್ಟ್ ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ 67 ಇನಿಂಗ್ಸ್ಗಳಲ್ಲಿ 5306 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 3.48 ಎಕಾನಮಿ ರೇಟ್ನಲ್ಲಿ ಒಟ್ಟು 100 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಈ ನೂರು ವಿಕೆಟ್ಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ಪರ ಟೆಸ್ಟ್ನಲ್ಲಿ ಶತಕ ಪೂರೈಸಿದ 24ನೇ ಬೌಲರ್ ಎನಿಸಿಕೊಂಡಿದ್ದಾರೆ. ಸದ್ಯ ಇರ್ಫಾನ್ ಪಠಾಣ್ (100 ವಿಕೆಟ್ಸ್) ದಾಖಲೆ ಸರಿಗಟ್ಟಿರುವ ಮೊಹಮ್ಮದ್ ಸಿರಾಜ್ ಮುಂಬರುವ ಸರಣಿಗಳ ಮೂಲಕ 15 ವಿಕೆಟ್ ಕಬಳಿಸಿದರೆ ಈ ಪಟ್ಟಿಯಲ್ಲಿ 19ನೇ ಸ್ಥಾನಕ್ಕೇರಬಹುದು.
ಇನ್ನು ಮೊಹಮ್ಮದ್ ಸಿರಾಜ್ ಅವರ ಈ ಸಾಧನೆಯ ಹೊರತಾಗಿಯೂ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ 185 ರನ್ ಬಾರಿಸಿದರೆ, ಆಸ್ಟ್ರೇಲಿಯಾ 181 ರನ್ಗಳಿಗೆ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಭಾರತ ತಂಡವು ಕೇವಲ 157 ರನ್ಗಳಿಗೆ ಆಲೌಟ್ ಆಯಿತು. ಅದರಂತೆ ಕೊನೆಯ ಇನಿಂಗ್ಸ್ನಲ್ಲಿ 162 ರನ್ಗಳ ಗುರಿ ಪಡೆದ ಆಸ್ಟ್ರೇಲಿಯಾ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.