ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ 5 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಈ ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗಾಗಿ ದುಬೈಗೆ ತೆರಳಲಿದೆ. ಇನ್ನು ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಲಿದೆ.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 8 ಪಂದ್ಯಗಳ ಸರಣಿ ಆಡಲಿದೆ. ಈ ಸರಣಿಯಲ್ಲಿ 5 ಟಿ20 ಮತ್ತು 3 ಏಕದಿನ ಪಂದ್ಯಳನ್ನಾಡಲಾಗುತ್ತದೆ. ಅತ್ತ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಲಿರುವ ಆಟಗಾರರಿಗೆ ಟಿ20 ಸರಣಿ ವೇಳೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದ್ದು, ಈ ಬದಲಾವಣೆಯ ಪ್ರಮುಖಾಂಶಗಳು ಈ ಕೆಳಗಿನಂತಿದೆ..
- ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಜಸ್ಪ್ರೀತ್ ಬುಮ್ರಾಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತದೆ.
- ಮೊಹಮ್ಮದ್ ಸಿರಾಜ್ಗೆ 5 ಪಂದ್ಯಗಳ ಟಿ20 ಸರಣಿ ವೇಳೆ ರೆಸ್ಟ್ ನೀಡಲು ನಿರ್ಧರಿಸಲಾಗಿದೆ.
- ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಏಕದಿನ ಸರಣಿಯ ಮೂರು ಪಂದ್ಯಗಳಲ್ಲೂ ಕಾಣಿಸಿಕೊಳ್ಳಲಿದ್ದಾರೆ.
- ಏಕದಿನ ಸರಣಿ ವೇಳೆ ಮೊಹಮ್ಮದ್ ಸಿರಾಜ್ ಕೂಡ ತಂಡಕ್ಕೆ ಆಗಮಿಸಲಿದ್ದಾರೆ.
- ಮೊಹಮ್ಮದ್ ಶಮಿ ಅವರನ್ನು ಫಿಟ್ನೆಸ್ ಟೆಸ್ಟ್ ಬಳಿಕ ಏಕದಿನ ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
- ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
- ಯಶಸ್ವಿ ಜೈಸ್ವಾಲ್ ಅವರನ್ನು ಭಾರತ ಏಕದಿನ ತಂಡದ ಹೆಚ್ಚುವರಿ ಆರಂಭಿಕನಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
- ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಏಕದಿನ ತಂಡಕ್ಕೆ ಪರಿಗಣಿಸಲು ಬಿಸಿಸಿಐ ಆಯ್ಕೆ ಸಮಿತಿ ಚರ್ಚಿಸಿದೆ.
- ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿರುವ ಬಹುತೇಕ ಆಟಗಾರರು ಚಾಂಪಿಯನ್ಸ್ ಟ್ರೋಫಿಗೂ ಆಯ್ಕೆಯಾಗಲಿದ್ದಾರೆ.
- ಜನವರಿ 12 ರಂದು ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸುವ ಸಾಧ್ಯತೆಯಿದೆ.
ಇಂಗ್ಲೆಂಡ್ ವಿರುದ್ಧದ ಸರಣಿ ಯಾವಾಗ ಶುರು?
ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಆರಂಭವಾಗಲಿದ್ದು, ಮೊದಲಿಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದಾದ ಬಳಿಕ ಮೂರು ಮ್ಯಾಚ್ಗಳ ಏಕದಿನ ಸರಣಿಯನ್ನು ಆಡಲಾಗುತ್ತದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
- 1ನೇ T20I: ಜನವರಿ 22 (ಚೆನ್ನೈ)
- 2ನೇ T20I: ಜನವರಿ 25 (ಕೋಲ್ಕತ್ತಾ)
- 3ನೇ T20I: ಜನವರಿ 28 (ರಾಜ್ಕೋಟ್)
- 4ನೇ T20I: ಜನವರಿ 31 (ಪುಣೆ)
- 5ನೇ T20I: ಫೆಬ್ರವರಿ 2 (ಮುಂಬೈ)