ನಿತ್ಯಪಂಚಾಂಗ  ಮತ್ತು 12 ರಾಶಿಗಳ ದಿನ ಭವಿಷ್ಯ 9 January 2025

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದಶಮೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:29ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:01 ರಿಂದ 08:26 ರವರೆಗೆ, ಗುಳಿಕ ಬೆಳಿಗ್ಗೆ 09:51 ರಿಂದ ಮಧ್ಯಾಹ್ನ11:15 ರವರೆಗೆ.

ಮೇಷ ರಾಶಿ: ಇಂದು ಆರ್ಥಿಕ ವ್ಯವಹಾರವನ್ನು ಮಾಡುವವರಿಗೆ ಅವಕಾಶ, ಆದಾಯವೂ ಹೆಚ್ಚಾಗುವುದು. ಪ್ರವಾಸದಲ್ಲಿ ಇರುವ ನಿಮಗೆ ಮಾನಸಿಕ‌ ಚಿಂತೆ ಕಾಡಬಹುದು. ‌ಮನೆಯ ಬಗ್ಗೆಯೆರ ಹೆಚ್ಚು ಯೋಚಿಸುವಿರಿ. ಅನಾರೋಗ್ಯವು ಉತ್ಸಾಹವನ್ನು ಕಡಿಮೆ ಮಾಡುವುದು. ಗೌಪ್ಯವಾಗಿ ನಿಮ್ಮ ಯೋಜನೆಯನ್ನು ತಿಳಿದುಕೊಳ್ಳಲು ಶತ್ರುಗಳು ಪ್ರಯತ್ನಿಸಬಹುದು. ಅತಿಯಾದ ಒತ್ತಡದಿಂದ ಮಾಡುವ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮ ಮಾಡಲಿದೆ. ಮನಸ್ಸಿನ ಚಾಂಚಲ್ಯವನ್ನು ಬಿಡಿಸುವುದು ಕಷ್ಟವೇನಲ್ಲ. ಖರ್ಚಿಗೆ ಬರುವ ಎಲ್ಲ ಮಾರ್ಗವನ್ನೂ ನಿಲ್ಲಿಸುವಿರಿ. ವಿನಾಕಾರಣ ಸಂಗಾತಿಯನ್ನು ದ್ವೇಷಿಸುವಿರಿ. ವಿದ್ಯಾಭ್ಯಾಸವು ನಿಮಗೆ ಬೇಸರ ತರಿಸಬಹುದು. ಯಾರಿಂದಲಾದರೂ ಹಿತವಚನದ ಅವಶ್ಯಕತೆ ಇರುವುದು. ಸ್ತ್ರೀಯರಿಂದ ಇಂದು ಸಹಾಯವನ್ನು ಪಡೆಯುವಿರಿ. ಬರಬೇಕಾದ ಹಣವನ್ನು ನೀವೇ ಖುದ್ದಾಗಿ ಹೋಗಿ ಪಡೆಯಬೇಕಾಗಬಹುದು. ಸುಮ್ಮನೇ ಯಾರ ಮೇಲೋ ಸಿಟ್ಟಾಗುವುದು ಬೇಡ.

ವೃಷಭ ರಾಶಿ: ಕೃಷಿಯಿಂದ ಅಧಿಕಲಾಭವನ್ನು ಪಡೆಯುಬಿರಿ. ಪರಿಶ್ರಮದ ಗಳಿಕೆಯನ್ನು ಉಳಿಸಿಕೊಳ್ಳುವುದು ಉತ್ತಮ. ಬೇಕಾದ ವಸ್ತುವು ಕಣ್ಮರೆಯಾಗಬಹುದು. ಸ್ವಂತ ವಾಹನದಿಂದ ನೀವು ಲಾಭವನ್ನು ಗಳಿಸುವಿರಿ. ಸಂಯಮವನ್ನು ಬಿಡದಹಾಗೆ ವರ್ತಿಸಿ ಭೇಷ್ ಎನಿಸಿಕೊಳ್ಳುವಿರಿ. ಇಂದು ನಿಮಗೆ ಜೊತೆಗೆ ಯಾರೂ ಇಲ್ಲ ಎಂಬ ಅನಾಥಪ್ರಜ್ಞೆಯು ಕಾಡುವುದು. ಖರ್ಚು ಮಾಡುವ ಸಂದರ್ಭ ಬಂದರೂ ಅದು ತಪ್ಪಿ ಹೋಗುವುದು.‌ ಉದ್ಯಮಿಗಳು ನೌಕರರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಳ್ಳುವಿರಿ. ಸ್ಥಿರಾಸ್ತಿಯನ್ನು ಮಾರಾಟ ಮಾಡಲು ಇಷ್ಟವಿಲ್ಲದಿದ್ದರೂ ಅನಿವಾರ್ಯವೆನಿಸುವುದು. ವಿದೇಶದ ವ್ಯವಹಾರದಲ್ಲಿ ನಿಮಗೆ ಹೆಚ್ಚು ಪ್ರಯೋಜನವನ್ನು ನೀಡುವವರನ್ನು ಭೇಟಿಯಾಗುವಿರಿ. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವರು. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮುಖಂಡರಿಗೆ ಬೆಂಬಲ ಸಿಗಲಿದೆ.

ಮಿಥುನ ರಾಶಿ: ಇಂದು ಮಕ್ಕಳ ಕ್ಷೇಮದ ಬಗ್ಗೆ ಅತಿಯಾದ ಕಾಳಜಿ ಇರುವುದು. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾಗಿ ಇರುವುದಿಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ‌ ಇರುಬುದು. ಪ್ರೀತಿಯಿಂದ ಕೊಟ್ಟ ವಸ್ತುವನ್ನು ಮತ್ತೆ ಕೊಡುವುದು ಬೇಡ. ಸಂಗಾತಿಯ ಜೊತೆ ಸಣ್ಣ ವಿಚಾರಗಳಿಗೂ ಜಗಳವಾಡುವಿರಿ. ಮಕ್ಕಳ ಬಗ್ಗೆ ನಿಮ್ಮ ಭಾವನೆ ತಪ್ಪಾಗಬಹುದು. ಯಥಾರ್ಥವಾಗಿ ಎಲ್ಲವನ್ನೂ ತಿಳಿದುಕೊಳ್ಳುವುದು ಒಳ್ಳೆಯದು. ಏಕಾಂತವು ಹೆಚ್ಚು ರುಚಿಸುವುದು. ಆದಾಯವು ಕಡಿಮೆ ಆಗಿ ಅನಿವಾರ್ಯದ ಖರ್ಚು ಹೆಚ್ಚಾಗಬಹುದು. ಮಗಳನ್ನು ಬಹಳ ಅಕ್ಕರೆಯಿಂದ ನೋಡುವಿರಿ. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ‌ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ.

ಕರ್ಕಾಟಕ ರಾಶಿ: ಇಂದು ಅಪರೂಪದ ಅತಿಥಿ ಸತ್ಕಾರದಿಂದ ನಿಮಗೆ ಸಂತೋಷ. ಮಿತ್ರನ ನಂಬಿಕೆಯನ್ನು ಕಳೆದುಕೊಂಡು, ನೀವು ಇಂದು ಎಲ್ಲರಿಂದ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಮಾತನಾಡುವಾಗ ಪೂರ್ಣ ಮಾಹಿತಿ ಇರಲಿ. ಯಾರನ್ನೂ ಸುಮ್ಮನೇ ದೂಷಿಸುವುದು ಬೇಡ. ಸರಿಯಾದ ಕಾರಣವನ್ನು ಕೊಡಬೇಕಾಗುವುದು. ಮಂಗಲ ಕಾರ್ಯಗಳಿಂದ ನೆಮ್ಮದಿ ಇರುವುದು. ಮಿತ್ರನ ನಂಬಿಕೆಯನ್ನು ಕಳೆದುಕೊಂಡು, ಆದ ನಷ್ಟಕ್ಕೆ ದುಃಖಿಸುವಿರಿ. ಸ್ಥಿರಾಸ್ತಿಯನ್ನು ವ್ಯವಹಾರ‌ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಎಲ್ಲರ‌ ಮೇಲೂ ಸಿಟ್ಟು ಮಾಡಿಕೊಂಡು ಸುಮ್ಮನಿರುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಆದ ಪ್ರಗತಿಯಿಂದ ನಿಮಗೆ ಸಂತೋಷವಾಗಲಿದೆ. ಸಮಯಸ್ಫೂರ್ತಿಯಿಂದ ಇಂದಿನ ಅನಾಹುತವನ್ನು ತಪ್ಪಿಸಿಕೊಳ್ಳುವಿರಿ. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು.

ಸಿಂಹ ರಾಶಿ: ನಿಮ್ಮಿಂದ ದೂರಾಗುವ ಜನರನ್ನು ಉಳಿಸಿಕೊಳ್ಳುವಿರಿ. ಸಾಹಿತ್ಯಾಸಕ್ತಿಯುಳ್ಳವರಿಗೆ ಹೊಸ ದಿಕ್ಕು ತೋಚುವುದು. ಸೇವಾ ಮನೋಭಾವಕ್ಕೆ ಗೌರವ ಸಿಗಲಿದೆ. ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯು ನಿಮ್ಮ ಮುಂದಿನ ಯೋಜನೆಗೆ ನಕಾರವನ್ನು ಹೇಳುವರು. ಇಂದಿನ ಕಾರ್ಯದಲ್ಲಿ ಮುನ್ನಡೆಯಿರಲಿದ್ದು ನಿಮ್ಮ ಬಗ್ಗೆ ಸದಭಿಪ್ರಾಯವು ಇರುವುದು. ಆಪ್ತರ ಜೊತೆ ಮಾಡಿದ‌ ಸಮಾಲೋಚನೆಯಿಂದ ಮನಸ್ಸಿಗೆ ಸಂತೋಷ ಸಿಗುವುದು. ಸ್ಥಳ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು. ಆಕಸ್ಮಿಕವಾದ ವಿಷಯದಿಂದ ನಿಮಗೆ ದುಃಖವಾಗುವುದು. ವಿದ್ಯಾಭ್ಯಾಸದ ಕಾರಣಕ್ಕೆ ಪ್ರಯಾಣ ಮಾಡು ಸನ್ನಿವೇಶವು ಬರಬಹುದು. ಸರ್ಕಾರದ ಆರ್ಥಿಕ ತಜ್ಞರಿಗೆ ಪದೋನ್ನತಿ‌ ಸಿಗಲಿದೆ.

ಕನ್ಯಾ ರಾಶಿ: ಇಂದು ನಿಮ್ಮದೇ ಆದ ಒರಟುತನವು ಇತರರಿಗೆ ಕಷ್ಟಕೊಡುವುದು. ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಪ್ರಮುಖ ಸ್ಥಾನದಲ್ಲಿ ಇರುವವರು ವ್ಯವಹಾರವು ತಪ್ಪದಂತೆ ನೋಡಿಕೊಳ್ಳಬೇಕು. ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗುವುದು. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ಬಂಧುಗಳ ಮಾತಿನಿಂದ ಬೇಸರವಾಗಲಿದೆ. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಸಂಗಾತಿಯಿಂದ ನಿಮಗೆ ನೂತನ ವಸ್ತ್ರಗಳು ಬರಬಹುದು. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು. ಪಾಲುದಾರಿಕೆಯಿಂದ ಹೊರಬರವುದು ಒಳ್ಳೆಯದು ಎಂದು ಅನ್ನಿಸಬಹುದು. ಯಾವುದನ್ನಾದರೂ ಆಯ್ಕೆ ಮಾಡುವಾಗ ನಿಮ್ಮನೇ ನೀವು ಕೇಳಿಕೊಳ್ಳುವುದು ಉತ್ತಮ. ಆತ್ಮೀಯವಾಗಿ ಮಾತನಾಡುವವರು ಇಂದು ಸಿಗಬಹುದು.

ತುಲಾ ರಾಶಿ; ಎಲ್ಲದಕ್ಕೂ ನಿಮ್ಮ ಕರ್ಮವೇ ಕಾರಣವೆಂದು ಸುಮ್ಮನಾಗುವಿರಿ. ಇಂದು ನೀವು ವ್ಯವಸ್ಥೆಯನ್ನು ಸರಿ ಮಾಡುವ ಯೋಜನೆ ಹಾಕಿಕೊಳ್ಳುವಿರಿ. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ವೈದ್ಯ ವೃತ್ತಿಯಲ್ಲಿ ಒತ್ತಡವು ಅಧಿಕವಾಗಿ ಬರಬಹುದು. ಬೇಡದ ಕಾರ್ಯಕ್ಕೆ ಪ್ರೇರಣೆ ಸಿಗಲಿದೆ‌ ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು. ಮಕ್ಕಳು ನಿಮ್ಮ ಮಾತನ್ನು ಕೇಳದೇ ತಮಗೆ ತೋಚಿದಂತೆ ನಡೆದುಕೊಳ್ಳುವುದು ನಿಮಗೆ ಇಷ್ಟವಾಗದು. ಪದೋನ್ನತಿಯ ವಿಚಾರದಲ್ಲಿ ನಿಮಗೆ ಸ್ಪಷ್ಟ ಮಾಹಿತಿ ಸಿಗದು. ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಎಲ್ಲರದ್ದೂ ಒಂದು ದಾರಿಯಾದರೆ ನಿಮ್ಮದೇ ಒಂದು ದಾರಿ.

ವೃಶ್ಚಿಕ ರಾಶಿ; ಇಂದು ವಿಳಂಬವಾದ ಕಾರ್ಯಕ್ಕೆ ದಂಡಕಟ್ಟುವ ಸಂದರ್ಭ ಬರಬಹುದು. ಅನಿರೀಕ್ಷಿತ ಹಣದ ಆಗಮನದಿಂದ‌ ಕೊಡಬೇಕಾದವರಿಗೆ ಕೊಟ್ಟು ಮುಗಿಸುವಿರಿ. ಜೋಪಾನವಾಗಿ ಇಟ್ಟುಕೊಂಡಷ್ಟೂ ಅಪಾಯ ಅಧಿಕವಾಗಬಹುದು. ಎಂದಿಗಿಂತ ಇಂದು ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ಏರುದನಿಯಲ್ಲಿ ಮಾತನಾಡಿದರೆ ಕೆಲಸವಾಗದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುವು. ಇಂದು ಸಂಗಾತಿಯ ಮೌನದಿಂದ ನಿಮಗೆ ಆತಂಕವಾಗಲಿದೆ. ಬೇಕಾದಷ್ಟು ಮಾತುಗಳು ಮಾತ್ರ ಆಡಿರಿ. ಇಂದು ನಿಮ್ಮನ್ನು ಅಪರಿಚಿತರು ಭೇಟಿ ಮಾಡಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು.

ಧನು ರಾಶಿ; ಇಂದು ವ್ಯಾಪಾರಕ್ಕೆ ಬೇಕಾದ ಹಣವನ್ನು ಸಾಲವಾಗಿ ಜನರಿಂದ ಪಡೆಯುವಿರಿ. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಅವಶ್ಯಕವಾದೀತು. ಪ್ರೀತಿಯು ಸುಖಾಂತ್ಯ ಕಾಣಬಹುದು. ಅಲ್ಪವಾದರೂ ದಾನ ಮಾಡಬೇಕು ಎಂಬ ಮನಸ್ಸಾಗುವುದು. ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗಮಾಡಬೇಕಾದೀತು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ದೇಹದ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳದೇ ಗೌಪ್ಯವಾಗಿ ಇಟ್ಟಕೊಳ್ಳುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ನಿಮ್ಮ ಅಹಂಕಾರವೇ ನಿಮಗೆ ಪಾಠವಾಗಬಹುದು. ಸುತ್ತಾಟದಿಂದ ಆಯಾಸ ಅಧಿಕವಾಗುವುದು.

ಮಕರ ರಾಶಿ; ಇಂದು ನಿಮಗೆ ಅಪರಿಚಿತ ಮಹಿಳೆಯರಿಗೆ ಸಹಾಯ ಮಾಡಿದ್ದರಿಂದ ಸಂಕಷ್ಟಕ್ಕೆ ಸಿಲುಕುವಿರಿ. ನಿಮ್ಮ ನಿಲುವನ್ನು ಎಂದಿಗೂ ಬದಲಿಸುವ ಯೋಚನೆ ಬೇಡ. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರದ ಯೋಗ ಬರುವುದು. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ನಿಮ್ಮ ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ನೇರ ಮಾತಿನಿಂದ ಬೇಸರವನ್ನು ಉಂಟುಮಾಡುವಿರಿ. ಸರಳವಾಗಿ ಇರಲು ಇಷ್ಟವಾಗದು. ಹಿತಶತ್ರುಗಳ ಬಗ್ಗೆ ಅಧಿಕ ಯೋಚನೆ ಮಾಡುವಿರಿ. ನಿಮ್ಮ ಇಂದಿನ ಅಸಹಾಯಕ‌ ಸ್ಥಿತಿಯನ್ನು ಯಾರಲ್ಲಿಯೂ ಹೇಳಿಕೊಳ್ಳುವುದು ಕಷ್ಟ. ಇಂದು ನೀವು ಉದ್ಯೋಗದಿಂದ ಸ್ವಲ್ಪ ವಿಶ್ರಾಂತಿ ಪಡೆಯುವಿರಿ.

ಕುಂಭ ರಾಶಿ: ಇಂದು ಕೂಡಿಟ್ಟ ಹಣದಿಂದ ವಾಹನ ಖರೀದಿ ಮಾಡುವ ಯೋಚನೆ ಬರುವುದು. ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ದಾಖಲೆಗಳ ಬಗ್ಗೆ ಸರಿಯಾದ ಜ್ಞಾನವಿರಲಿ. ಸಂಗಾತಿಯಿಂದ ಸಿಗುವ ಸುಖದಿಂದ ನೀವು ವಂಚಿತರಾಗುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ನಿಮಗೆ ಬೇಕಾದ ವ್ಯಕ್ತಿಯ ಆಯ್ಕೆಯಲ್ಲಿ ನೀವು ಸೋಲುವಿರಿ. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವುದು ಇಷ್ಟವಾಗದು. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಸ್ನೇಹ ಸಂಬಂಧಗಳನ್ನು ದೂರ ಮಾಡಿಕೊಳ್ಳದೇ ನಿರ್ವಹಿಸಿ. ಬೇಡದ ವಿಚಾರದ ಕಡೆ ಮನಸ್ಸು ಹೋಗುವುದು‌. ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗುವುದು. ಹೂಡಿಕೆಯನ್ನು ಮಾಡುವಾಗ ಲೆಕ್ಕಾಚಾರದ ಬಗ್ಗೆ ಗಮನ ಬೇಕು.

ಮೀನ ರಾಶಿ; ಇಂದು ನೀವು ಹೊಸ ಆಲೋಚನೆಗಳಿಂದ ಬಹಳ ಉತ್ಸಾಹವಿರುವುದು. ಇದೇ ಅನೇಕ ದಿನಗಳ ಅನಂತರ ಬಂದ ಉತ್ಸಾಹದ ದಿನವಾಗಿದೆ. ತಮ್ಮ ಕಾರ್ಯಕ್ಕೆ ಯಾರನ್ನಾದರೂ ಬಳಸಿಕೊಳ್ಳಬಹುದು. ವೃತ್ತಿಯ ಜೀವನದಲ್ಲಿ ಯಾವುದೇ ಪ್ರಮುಖ ಸಮಸ್ಯೆಯು ನಿಮ್ಮ ದಕ್ಷತೆಯ ಮೇಲೆ ಯಾವ ಪರಿಣಾಮವನ್ನು ಉಂಟುಮಾಡದು. ಇಂದು ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಕಾಡುವುದಿಲ್ಲ. ದಾಂಪತ್ಯದಲ್ಲಿ ಅನಿರೀಕ್ಷಿತವಾಗಿ ಸಿಕ್ಮ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸನ್ನು ಉದ್ವೇಗಕ್ಕೆ ಒಡ್ಡದೇ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು.