ಕೇಂದ್ರ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಹಾಗೂ ಜಿಲ್ಲಾ ಭೂ ವಿಜ್ಞಾನಿಗಳ ತಂಡದಿಂದ ಮುಟ್ಟಳ್ಳಿ ಗುಡ್ಡ ಕುಸಿದ ಸ್ಥಳ ಪರಿಶೀಲನೆ

ಭಟ್ಕಳ: ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದ ಸ್ಥಳಕ್ಕೆ ಕೇಂದ್ರದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಹಾಗೂ ಜಿಲ್ಲಾ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಭಟ್ಕಳದ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ಕು ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಕೇಂದ್ರದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಹಾಗೂ ಜಿಲ್ಲಾ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.