ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ

ಬೆಂಗಳೂರು, ಜನವರಿ 13: ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆ ಶೋಭ (60) ಮತ್ತು ಕರೀಬುಲ್ಲ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ದಿಜುಧಾರ್​ ಎಂಬುವರ ಮನೆಯಲ್ಲಿ ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀರ್ವತೆಗೆ ಎದುರು ಮನೆಯವರಿಗೂ ಗಾಯವಾಗಿದೆ.

ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಗಸಂದ್ರದಲ್ಲಿನ ಆರ್​.ಎ.ಫ್ಯಾಷನ್ ಗಾರ್ಮೆಂಟ್ಸ್​ನಲ್ಲಿ​​ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ. 40 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಬಟ್ಟೆ ಸೇರಿದಂತೆ ಹಲವು ವಸ್ತುಗಳು ಸುಟ್ಟುಭಸ್ಮವಾಗಿವೆ. R.A.ಫ್ಯಾಷನ್ ಗಾರ್ಮೆಂಟ್ಸ್​​ ಅರುಣ್ ಮತ್ತು ಶಿವು ಎಂಬುವರಿಗೆ ಸೇರಿದೆ.

ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.