ಯಲ್ಲಾಪುರ: ಪಡೆದ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ದೇಶದ ಸಮಗ್ರತೆ ಮತ್ತು ಏಕತೆಯನ್ನು ಕಾಯ್ದುಕೊಂಡು ಹೋಗಬೇಕು ಎಂದು ತಹಶಿಲ್ದಾರ ಶ್ರೀಕೃಷ್ಣ ಕಾಮ್ಕರ್ ಹೇಳಿದರು. ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಶಿಷ್ಟ ಕ್ರೀಡಾ ಸಾಧನೆಗಾಗಿ ನಿರೀಕ್ಷಿತ್ ಸಂತೋಷ ನಾಯ್ಕ ಸನ್ಮಾನಿಸಲಾಯಿತು. ಜೊತೆಗೆ ಗಂಗಾವಳಿ ನದಿಯಲ್ಲಿ ಬೋಟ್ ನಲ್ಲಿ ಸಿಲುಕಿದವರನ್ನು ರಕ್ಷಿಸಿ ಸಾಹಸ ಮೆರೆದ ಸಾಧಕರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಸಿಪಿಐ ಸುರೇಶ ಯಳ್ಳೂರು, ಬಿಇಒ ಎನ್.ಆರ್.ಹೆಗಡೆ, ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯ, ತಾ.ಪಂ ಇಒ ಜಗದೀಶ ಕಮ್ಮಾರ, ಗ್ರೇಡ್ 2 ತಹಸೀಲ್ದಾರ ಸಿ.ಜಿ.ನಾಯ್ಕ, ಭಾರತ ಸೇವಾದಳದ ಸಂಜೀವಕುಮಾರ ಹೊಸ್ಕೇರಿ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ ಇತರರಿದ್ದರು.