ಬಿಗ್​ ಬಾಸ್​ ಕನ್ನಡ ಸೀಸನ್​ 11ರ ಮಾಜಿ ಸ್ಪರ್ಧಿ ಲಾಯರ್​ ಜಗದೀಶ್​ ಬಂಧನ

ಬೆಂಗಳೂರು, ಜನವರಿ 25: ಬಿಗ್​ ಬಾಸ್​ ಕನ್ನಡ ಸೀಸನ್​ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್​ ಮ್ಯಾನ್​ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್​ ಜಗದೀಶ್​ರನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.