ಮುಂಬೈ ದಾಳಿ ಸಂಚುಕೋರ ತಹಾವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ: ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವು

ನವದೆಹಲಿ, ಜನವರಿ 25: 2008ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮರು ದಿನವೇ ಅಮೆರಿಕ ಸುಪ್ರೀಂಕೋರ್ಟ್​​​ನಿಂದ ಈ ತೀರ್ಪು ಹೊರಬಿದ್ದಿದೆ.

ರಾಣಾ ಹಸ್ತಾಂತರವನ್ನು ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ರಾಣಾ ಮನವಿಯನ್ನು ವಜಗೊಳಿಸಿರುವ ಕೋರ್ಟ್, ಭಾರತಕ್ಕೆ ಹಸ್ತಾಂತರ ಮಾಡಬಹುದು ಎಂದು ತೀರ್ಪು ನೀಡಿದೆ.