ವಿಜಯಪುರ: ಹಾಡಹಗಲೇ ಗುಂಡಿನ ದಾಳಿ, ಇಷ್ಟಪಟ್ಟಿದ ಯುವತಿ ಮೃತಪಟ್ಟ ದಿನವೇ ಯುವಕನ ಕೊಲೆ

ಅರಕೇರಿಯಿಂದ ಮನಾವರದೊಡ್ಡಿಗೆ ಕಾರಿನಲ್ಲಿ ಹೊರಟಿದ್ದ ವೇಳೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ಸತೀಶ ರಾಠೋಡ ಮೃತಪಟ್ಟಿದ್ದಾನೆ. ಕೊಲೆಯಾದ ಸ್ಥಳದಲ್ಲಿ ಮೃತನ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮಾನಾವರದೊಡ್ಡಿ ನಿವಾಸಿ ರಮೇಶ ಚೌವ್ಹಾಣ ಹಾಗೂ ಇತರರಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

ವಿಜಯಪುರ(ಜ.29): ಇಷ್ಟಪಟ್ಟಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟು ಸರಿಯಾಗಿ ಒಂದು ವರ್ಷಕ್ಕೆ ಈತನು ಗುಂಡಿನ ದಾಳಿಗೊಳಗಾಗಿ ಕೊಲೆಯಾಗಿರುವ ಮನಕಲಕುವ ಘಟನೆ ತಿಕೋಟಾ ತಾಲೂಕಿನ ಮನಾವರದೊಡ್ಡಿ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಅರಕೇರಿ ತಾಂಡಾ 1ರ ನಿವಾಸಿ ಸತೀಶ ರಾಠೋಡ(28) ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಯುವಕ.

ಅರಕೇರಿಯಿಂದ ಮನಾವರದೊಡ್ಡಿಗೆ ಕಾರಿನಲ್ಲಿ ಹೊರಟಿದ್ದ ವೇಳೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ಸತೀಶ ರಾಠೋಡ ಮೃತಪಟ್ಟಿದ್ದಾನೆ. ಕೊಲೆಯಾದ ಸ್ಥಳದಲ್ಲಿ ಮೃತನ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮಾನಾವರದೊಡ್ಡಿ ನಿವಾಸಿ ರಮೇಶ ಚೌವ್ಹಾಣ ಹಾಗೂ ಇತರರಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ಸ್ಥಳದಲ್ಲಿ ಒಂದು ಪಿಸ್ತೂಲ್, ಒಂದು ಚಾಕು ಹಾಗೂ ವ್ಯಕ್ತಿಯೊಬ್ಬನ ಕತ್ತರಿಸಿದ ಕಿವಿ ಪತ್ತೆಯಾಗಿವೆ. ಘಟನಾ ಸ್ಥಳವನ್ನು ಪರಿಶೀಲಿಸಿದರೆ ಏಕಾಏಕಿ ಗುಂಡಿನ ದಾಳಿಯಾಗಿಲ್ಲ, ಮೊದಲಿಗೆ ವಾಗ್ವಾದ ಹಾಗೂ ಗಲಾಟೆ ನಡೆದಿದ್ದು, ನಂತರ ಗುಂಡಿನ ದಾಳಿ ನಡೆದಿರುವ ಸಾಧ್ಯತೆ ಇದೆ. ಸುದ್ದಿ ತಿಳಿದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.