ಮಹಾಕುಂಭದಲ್ಲಿ ಬಸಂತ ಪಂಚಮಿ ಪ್ರಯುಕ್ತ ಬೆಳ್ಳಂಬೆಳಗ್ಗೆ 62 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಅಮೃತ ಸ್ನಾನ

ಪ್ರಯಾಗ್​ರಾಜ್: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಬಸಂತ ಪಂಚಮಿಯ ಅಮೃತ ಸ್ನಾನದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಇಂದು ಮುಂಜಾನೆ 8 ಗಂಟೆಯೊಳಗೆ 62 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಉತ್ತರ ಪ್ರದೇಶದ ಮಾಹಿತಿ ಇಲಾಖೆಯ ಪ್ರಕಾರ, ಜನವರಿ 13ರಂದು ಮಹಾ ಕುಂಭಮೇಳ ಪ್ರಾರಂಭವಾದಾಗಿನಿಂದ ಇಂದಿನವರೆಗೆ 349.7 ಮಿಲಿಯನ್‌ಗಿಂತಲೂ ಹೆಚ್ಚು (34.97 ಕೋಟಿ) ಭಕ್ತರು ಪವಿತ್ರ ಸ್ನಾನದಲ್ಲಿ ಭಾಗವಹಿಸಿದ್ದಾರೆ. 2025ರ ಮಹಾ ಕುಂಭ ಮೇಳದ ಕೊನೆಯ ‘ಅಮೃತ ಸ್ನಾನ’ ಬಸಂತ್ ಪಂಚಮಿಯಾದ ಇಂದು ನಡೆಯುತ್ತಿದೆ.