Arvind Kejriwal: ದೆಹಲಿ ಚುನಾವಣೆಯಲ್ಲಿ ಅರವಿಂದ್​ ಕ್ರೇಜಿವಾಲ್​ಗೆ ಸೋಲು, ಎಎಪಿ ವರಿಷ್ಠಗೆ ಭಾರೀ ಮುಖಭಂಗ

ನವದೆಹಲಿ, ಫೆಬ್ರವರಿ 08: ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್​ಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ. ಇದರೊಂದಿಗೆ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್​ಗೆ ಭಾರೀ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.