
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ಆರಂಭವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮೂರು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಅರ್ಷದೀಪ್ ಸಿಂಗ್ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಇತ್ತ ಮೊಹಮ್ಮದ್ ಶಮಿ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಹಾಗೆಯೇ ಎರಡನೇ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ವರುಣ್ ಚಕ್ರವರ್ತಿ ಈ ಪಂದ್ಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಕುಲ್ದೀಪ್ ಯಾದವ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ರವೀಂದ್ರ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಟಾಮ್ ಬ್ಯಾಂಟನ್, ಲಿಯಾಮ್ ಲಿವಿಂಗ್‌ಸ್ಟೋನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.
ಉಭಯ ತಂಡಗಳ ಮುಖಾಮುಖಿ:
ಭಾರತ ಮತ್ತು ಇಂಗ್ಲೆಂಡ್ ಈವರೆಗೆ 109 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 60 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 44 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ, ಇನ್ನೆರಡು ಪಂದ್ಯಗಳು ಟೈನಲ್ಲಿ ಅಂತ್ಯಗೊಂಡಿತ್ತು.
ಈ ಅಂಕಿ ಅಂಶಗಳ ಪ್ರಕಾರ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಮೇಲುಗೈ ಹೊಂದಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.
ಸರಣಿ ಗೆದ್ದಿರುವ ಟೀಮ್ ಇಂಡಿಯಾ:
ಮೂರು ಪಂದ್ಯಗಳ ಈ ಸರಣಿಯ ಮೊದಲೆರಡು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ಅನ್ನು 4 ವಿಕೆಟ್ಗಳಿಂದ ಸೋಲಿಸಿತ್ತು. ಇನ್ನು ಕಟಕ್ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲೂ ಇಂಗ್ಲೆಂಡ್ 4 ವಿಕೆಟ್ಗಳಿಂದ ಸೋಲನುಭವಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸೋಲಿನ ಅವಮಾನ ತಪ್ಪಿಸಿಕೊಳ್ಳುವ ಇರಾದೆಯಲ್ಲಿದೆ ಇಂಗ್ಲೆಂಡ್.
ಇತ್ತ ಆಂಗ್ಲರ ವಿರುದ್ಧ ಪಾರುಪತ್ಯ ಮುಂದುವರೆಸಿದರು ಟೀಮ್ ಇಂಡಿಯಾ ಅಂತಿಮ ಪಂದ್ಯದಲ್ಲೂ ಗೆಲ್ಲುವ ಮೂಲಕ ಗೆಲುವಿನ ಲಯದೊಂದಿಗೆ ಚಾಂಪಿಯನ್ಸ್ ಟ್ರೋಫಿಗೆ ತೆರಳುವ ಇರಾದೆಯಲ್ಲಿದೆ. ಹೀಗಾಗಿ ಇಂದಿನ ಪಂ
