100 ವರ್ಷ ಹಳೆಯ ಶಾಲೆಯಲ್ಲಿ ಸ್ವಾತಂತ್ರ್ಯದ ಸಂಭ್ರಮ.!

ಭಟ್ಕಳ: ತಾಲೂಕಿಗೆ ಮಾದರಿಯಾದ ಶಾಸಕರ ಮಾದರಿ ಶಾಲೆ ಸೋನಾರಕೇರಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.

ಧ್ವಜಾರೋಹಣ ಕಾರ್ಯಕ್ರಮ ಹಾಗೂ ನಂತರ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಆದರೆ ಬೇಸರದ ಸಂಗತಿ ಏನೆಂದರೆ ಯಾರದ್ದೋ ಸ್ವಾರ್ಥಕ್ಕಾಗಿ ಮಕ್ಕಳ ಇಂತಹ ಉತ್ಸಾಹವನ್ನು ಕುಂಠಿತಗೊಳಿಸುವ ಕಾರ್ಯ ನಡೆಯುತ್ತಿದೆ.

ಕಳೆದ ಕೆಲವು ವರ್ಷಗಳಿಂದೀಚೆಗೆ ಶಾಲೆ ಅಭಿವೃದ್ಧಿ ಕಾಣದೆ ಶಿಥಿಲಾವಸ್ಥೆ ತಲುಪಿದೆ. ಶಾಲಾ ಮೇಲ್ಛಾವಣಿ ಶಿಥಿಲಗೊಂಡಿದ್ದು ಕುಸಿಯುವ ಆತಂಕದಲ್ಲಿ ವಿದ್ಯಾರ್ಥಿಗಳು ದಿನ ಕಳೆಯುತ್ತಿದ್ದಾರೆ. ರಿಪೇರಿ ಹಾಗೂ ನೂತನ ಕಟ್ಟಡಕ್ಕಾಗಿ ಸಂಬಂಧಪಟ್ಟವರಿಗೆ ಹಲವು ಬಾರಿ ತಿಳಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ. 100 ವರ್ಷ ಇತಿಹಾಸವಿರುವ ತಾಲೂಕಿಗೆ ಮಾದರಿಯಾಗಬೇಕಾದ ಶಾಲೆ ಇಂದು ಅಳಿವಿನಂಚಿಗೆ ತಲುಪಿರುವುದು ದುರದೃಷ್ಟಕರ. ಈ ಬಗ್ಗೆ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಶಾಲೆಯ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ.