ಪದ್ಮಶ್ರೀ ಪುರಸ್ಕೃತೆ ಸುಕ್ರಿ ಗೌಡ ನಿಧನಕ್ಕೆ ರೂಪಾಲಿ ನಾಯ್ಕ ಸಂತಾಪ

ಕಾರವಾರ ಫೆ.13 : ಹಾಡುಹಕ್ಕಿ, ಜಾನಪದ ಕೋಗಿಲೆ, ನಮ್ಮೆಲ್ಲರ ಹೆಮ್ಮೆಯ ಸುಕ್ರಿ ಬೊಮ್ಮ ಗೌಡ ನಮ್ಮನ್ನು ಅಗಲಿರುವುದು ತೀವ್ರ ಆಘಾತ ಉಂಟುಮಾಡಿದೆ. ಪದ್ಮಶ್ರೀ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಅವರನ್ನು ಕಳೆದುಕೊಂಡಿರುವುದು ಅತೀವ ನೋವಿಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಡತನದ ಬೇಗೆಯಲ್ಲೇ ಬೆಳೆದುಬಂದ ಸುಕ್ರಿ ಬೊಮ್ಮ ಗೌಡ ತಮ್ಮೆಲ್ಲ ನೋವುಗಳನ್ನು ನುಂಗಿಕೊಂಡು ಜಾನಪದ ಲೋಕವನ್ನು ಶ್ರೀಮಂತಗೊಳಿಸಿದರು. ಸಾರಾಯಿ ವಿರೋಧಿ ಆಂದೋಲನದಲ್ಲಿ ಪಾಲ್ಗೊಂಡು ಸಾಮಾಜಿಕ ಸ್ವಾಸ್ಥ್ಯದ ಬಗ್ಗೆಯೂ ಅಪಾರ ಕಳಕಳಿ ಹೊಂದಿದ್ದರು. ಅವರಿಲ್ಲದೆ ಜಾನಪದ ಲೋಕ ಬಡವಾಗಿದೆ. ನಮ್ಮೆಲ್ಲರಿಗೆ ಅವರು ಮಾರ್ಗದರ್ಶಕರಾಗಿದ್ದರು.

ಅವರಿಗೆ ನನ್ನ ಅಂತಿಮ ಪ್ರಣಾಮಗಳು. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ನೀಡಲಿ ಎಂದು ದೇವರನ್ನು ಪ್ರಾರ್ಥಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.