ಮುಖ್ಯಮಂತ್ರಿ ಬದಲಾವಣೆ ವಿಷಯ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗುತ್ತಿದೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ಮುಖ್ಯಮಂತ್ರಿ ಬದಲಾವಣೆ ಇಲ್ಲ ಅಂತ ಮತ್ತೊಮ್ಮೆ ಹೇಳಿದ್ದಾರೆ, ಆದರೆ ಈ ಬಾರಿ ಬೇರೆ ರೀತಿಯಲ್ಲಿ ರೀತಿ ತನ್ನ ಮಾತನ್ನು ಅರುಹಿದ್ದಾರೆ. ಮುಖ್ಯಮಂತ್ರಿಯವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೈಕಮಾಂಡ್ ಹೇಳಿದೆ, ಹಾಗಾಗಿ ಅವರನ್ನು ಬದಲಾಯಿಸುವ ಪ್ರಶ್ನೆ ಉದ್ಭವಿಸಲ್ಲ, ಇದು ಕೇವಲ ಮಾಧ್ಯಮಗಳಲ್ಲಿ ಮಾತ್ರ ಆಗುತ್ತಿರುವ ಚರ್ಚೆ, ಹಾಗಾಗಿ ಮಾಧ್ಯಮಗಳು ಸಿಎಂ ಬದಲಾವಣೆ ಸುದ್ದಿಗಳ ಪ್ರಸಾರಕ್ಕೆ ತಡೆಹಾಕಬೇಕು ಎಂದು ಯತೀಂದ್ರ ಹೇಳಿದ್ದಾರೆ.