ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿ

ನವದೆಹಲಿ: ಇಂದು ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿ. ಅದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಟಲ್ ಬಿಹಾರಿ ವಾಜಪೇಯಿಯವರ ಸಾಕುಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ, ಲೋಕಸಭಾಧ್ಯಕ್ಷ ಓಂ ಬಿರ್ಲಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಸದೈವ ಅಟಲ್ ಸ್ಮಾರಕ ಕೇಂದ್ರಕ್ಕೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ.