ಐಎಎಸ್​ ವರ್ಸಸ್ ಐಪಿಎಸ್​: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್​​

ಐಪಿಎಸ್​ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿನ ನಡುವೆ ಕಾನೂನು ನಡೆಯುತ್ತಿದ್ದು, ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, One Minute Apology ಪುಸ್ತಕ ಓದುವಂತೆ ಇಬ್ಬರು ಅಧಿಕಾರಿಗಳಿಗೆ ಸಲಹೆ ನೀಡಿತ್ತು. ಇದಾದ ಬೆನ್ನಲ್ಲೆ ಇದೀಗ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​ ರೂಪಾ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಂಗಳೂರು, (ಫೆಬ್ರವರಿ 21): ಐಪಿಎಸ್ ಅಧಿಕಾರಿ​ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗೆ ರೋಹಿಣಿ ಸಿಂಧೂರಿಗೆ ಕೋರ್ಟ್​ ರಿಲೀಫ್ ನೀಡಿದೆ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ. ಮಾರ್ಚ್​ 12 ರವರೆಗೆ ವಿಚಾರಣೆಗೆ ತಡೆಯಾಜ್ಙೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾyಮೂರ್ತಿ ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

19. 2. 2023ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಹಿಂಸೆಯಾಗಿದೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾನನಷ್ಡ ಪ್ರಕರಣ ದಾಖಲಿಸಿದ್ದರು.