ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರಿನಾ ಕೈಫ್; ಆಶ್ಲೇಷಾ ಬಲಿ ಪೂಜೆ ಮಾಡಿಸಿದ ಬಾಲಿವುಡ್ ನಟಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ತಂಗಿದ್ದಾರೆ. ದೇವಸ್ಥಾನದಲ್ಲಿ ಆಶ್ಲೇಷಾ ಬಲಿ ಪೂಜೆಯಲ್ಲಿ ಕತ್ರಿನಾ ಭಾಗಿ ಆಗಿದ್ದಾರೆ. ಆ ಬಳಿಕ ಅವರು ಸರ್ಪ ಸಂಸ್ಕಾರ ಸೇವೆ, ನಾಗ ಪ್ರತಿಷ್ಠಾ ಸೇವೆಯಲ್ಲಿ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ. ಸಂತಾನ, ವ್ಯವಹಾರಿಕ, ಕೌಟುಂಬಿಕ ಜೀವನದ ಒಳಿತಿಗಾಗಿ ವಿವಿಧ ಪೂಜೆಗಳನ್ನು ಮಾಡಿಸುತ್ತಾ ಇದ್ದಾರೆ.