ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ

ಹಾಸನ, ಮಾರ್ಚ್​ 16: ಜಿಲ್ಲೆಯಲ್ಲಿ ಮೊದಲ‌ ದಿನದ ಕಾಡಾನೆ (Elephant) ಸೆರೆ ಕಾರ್ಯಾಚರಣೆ ಮಾಡಲಾಗಿದ್ದು, ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಂತರ ಒಂಟಿಸಲಗವನ್ನು ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಎಸ್ಟೇಟ್​​ನನಲ್ಲಿ ಸೆರೆ ಹಿಡಿಯಲಾಗಿದೆ. ಅರವಳಿಕೆ ಮದ್ದು ನೀಡಿ ಅರಣ್ಯ ಸಿಬ್ಬಂದಿ ಕಾಡಾನೆ ಸೆರೆ ಹಿಡಿದಿದ್ದಾರೆ. ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ನಡೆದ ಕಾಡಾನೆ ಸೆರೆ ಯಶಸ್ವಿ ಆಗಿದೆ.