ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ:.

ರಾಯಚೂರು, ಮಾರ್ಚ್ 24: ಮಂತ್ರಾಲಯ ಮಠದಲ್ಲಿ ರಾಯರ ವರ್ಧಂತ್ಯೋತ್ಸವದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 30 ದಿನಗಳಲ್ಲಿ 3 ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಒಟ್ಟು 3,48,69,621 ರೂಪಾಯಿ ಹಾಗೂ 32 ಗ್ರಾಂ ಚಿನ್ನ,1 ಕೆಜಿ 240 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಿಕ್ಕಿದೆ. ಇದೇ ತಿಂಗಳು ರಾಯರ ವರ್ಧಂತ್ಯೋತ್ಸವ ಕಾರ್ಯಕ್ರಮ ನಡೆದಿದ್ದು, ಆರು ದಿನಗಳ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದರು.