
ನವದೆಹಲಿ, (ಮಾರ್ಚ್ 26): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ.