ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ

ನಾಗ್ಪುರ, ಮಾರ್ಚ್​ 30: ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದು, ಆರ್​ಎಸ್​ ಸಂಸ್ಥಾಪಕ ಡಾ. ಕೇಶವ್ ಬಲಿರಾಮ್ ಹೆಗ್ಡೆವಾರ್​ಗೆ ಪುಷ್ಪನಮನ ಸಲ್ಲಿಸಿದರು. ಪ್ರಧಾನಿ ಮೋದಿ ಅವರ ನಾಗ್ಪುರ ಭೇಟಿಯಿಂದಾಗಿ ಇಡೀ ವಿದರ್ಭದಲ್ಲಿ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಹೇಳಿದರು.

ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಹೆಡ್ಗೆವಾರ್ ಮತ್ತು ಮಾಧವ ಸದಾಶಿವ ಗೋಲ್ವಾಲ್ಕರ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಗ್ಪುರ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.

ಅವರು ಸೋಲಾರ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಲಿಮಿಟೆಡ್‌ನ ಯುದ್ಧಸಾಮಗ್ರಿ ಸೌಲಭ್ಯಕ್ಕೂ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಅವರು ನಾಗ್ಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕೇಂದ್ರವು 2014 ರಲ್ಲಿ ಗುರೂಜಿ ಗೋಲ್ವಾಲ್ಕರ್ ಅವರ ಸ್ಮರಣಾರ್ಥ ಸ್ಥಾಪಿಸಲಾದ ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ವಿಸ್ತರಣೆಯಾಗಲಿದೆ. ಈ ಹೊಸ ಸೌಲಭ್ಯವು 250 ಹಾಸಿಗೆಗಳ ಆಸ್ಪತ್ರೆ, 14 ಹೊರ ರೋಗ ಚಿಕಿತ್ಸಾ ಕೇಂದ್ರಗಳು ಮತ್ತು 14 ಆಧುನಿಕ ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಹೊಂದಿದ್ದು, ಸಾಮಾನ್ಯ ಜನರಿಗೆ ಕೈಗೆಟುಕುವ ಮತ್ತು ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುವುದು.