
ಹೊನ್ನಾವರ ಏ.02 : ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಹೊನ್ನಾವರ ಪಟ್ಟಣದ ತುಳಸಿನಗರದಲ್ಲಿ ನಡೆದಿದೆ..

ತುಳಸಿನಗರದ ಯಶೋಧಾ ಮಹಾಬಲೇಶ್ವರ ಮೇಸ್ತ ಎಂಬುವವರಿಗೆ ಸೇರಿದ ಮನೆ ಬೆಂಕಿ ಅವಘಡದಿಂದ ಹಾನಿಯುಂಟಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡದಿದೆ. ಸಂಜೆ 7.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೊತ್ತಿಕೊಂಡ ಬೆಂಕಿ ಇಡೀ ಮನೆಯನ್ನೇ ಆವರಿಸಿದೆ. ಪರಿಣಾಮ ಮನೆಯಲ್ಲಿದ್ದ ಟಿವಿ, ಫ್ರೀಡ್ಜ್, ಬಟ್ಟೆ, ಮತ್ತು ಇನ್ನೀತರ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಇನ್ನೂ ಮನೆಯಲ್ಲಿ ಯಾರೂ ಇಲ್ಲದಕ್ಕೆ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇನ್ನೂ ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಕೂಡಲೇ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬೆಂಕಿ ತೀವ್ರತೆ ಹೆಚ್ಚಾಗಿದ್ದು ಕೂಡಲೇ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿಸ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ..