ಏಪ್ರಿಲ್ 13ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 07: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರವರೆಗೂ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ? ಕೃಷ್ಣರಾಜಪೇಟೆ, ಆಗುಂಬೆ, ಪುತ್ತೂರು, ಬೆಳ್ತಂಗಡಿ, ಕಮ್ಮರಡಿ, ಕಳಸ, ನಾಪೋಕ್ಲು, ಕಾರ್ಕಳ, ಯಲ್ಲಾಪುರ, ಮಸ್ಕಿ, ಲಿಂಗಸುಗೂರು, ಕಕ್ಕೇರಿ, ಮುದ್ದೇಬಿಹಾಳ, ನಾಗಮಂಗಲ, ಅಜ್ಜಂಪುರ, ಹೊನ್ನಾಳಿ, ಸಿದ್ದಾಪುರ, ಬನವಾಸಿ, ಉಪ್ಪಿನಂಗಡಿ, ಬಬಲೇಶ್ವರ, ಕೂಡಲಸಂಗಮ, ಹುಂಚದಕಟ್ಟೆ, ಎಚ್​ಡಿ ಕೋಟೆ, ಟಿಜಿ ಹಳ್ಳಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.